ಶನಿವಾರ, ಅಕ್ಟೋಬರ್ 8, 2022
21 °C

ಕಾರು ಅಪಘಾತ: ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್‌ ಝೆಲೆನ್‌ಸ್ಕಿ ಪಾರು

ಎಪಿ Updated:

ಅಕ್ಷರ ಗಾತ್ರ : | |

ಕೀವ್: ಕಾರು ಅಪಘಾತದಲ್ಲಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಪಾರಾಗಿದ್ದಾರೆ ಎಂದು ಅವರ ವಕ್ತಾರ ಸೆರ್ಜಿ ನಿಕಿಫೋರೊವ್ ಫೇಸ್‌ಬುಕ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಯುದ್ಧಪೀಡಿತ ಪ್ರದೇಶಕ್ಕೆ ಗುರುವಾರ ಮುಂಜಾನೆ ಭೇಟಿ ಬಳಿಕ ಹಿಂತಿರುಗುತ್ತಿದ್ದ ವೇಳೆ ಝೆಲೆನ್‌ಸ್ಕಿ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಮತ್ತೊಂದು ಪ್ರಯಾಣಿಕ ವಾಹನ ಡಿಕ್ಕಿ ಹೊಡೆದಿದೆ.

ಇದನ್ನೂ ಓದಿ: 

ಸೇನೆ ಪುನಃ ವಶಪಡಿಸಿಕೊಂಡ ಇಝಿಯಮ್ ನಗರದಲ್ಲಿ ಸೈನಿಕರನ್ನು ಭೇಟಿ ಮಾಡಿದ್ದ ಅವರು, ಖಾರ್ಕಿವ್‌ನಿಂದ ಕೀವ್‌ಗೆ ಹಿಂದಿರುಗುತ್ತಿದ್ದರು.

ಈ ವೇಳೆ ಉಕ್ರೇನ್ ರಾಜಧಾನಿಯಲ್ಲಿ ಝೆಲೆನ್‌ಸ್ಕಿ ಸಂಚರಿಸುತ್ತಿದ್ದ ವಾಹನಕ್ಕೆ ಪ್ರಯಾಣಿಕ ವಾಹನವೊಂದು ಡಿಕ್ಕಿ ಹೊಡೆದಿದೆ ಎಂದು ಅವರ ವಕ್ತಾರ ತಿಳಿಸಿದ್ದಾರೆ.

ವೈದ್ಯಕೀಯ ತಂಡವು ಝೆಲೆನ್‌ಸ್ಕಿ ಅವರಿಗೆ ಪ್ರಥಮ ಚಿಕಿತ್ಸೆ ಒದಗಿಸಿದರು. ಬಳಿಕ ಅವರನ್ನು ಆಂಬ್ಯುಲೆನ್ಸ್ ಮೂಲಕ ಕರೆದೊಯ್ಯಲಾಯಿತು. ಆದರೆ ಗಂಭೀರ ಗಾಯವಾಗಿಲ್ಲ ಎಂದು ಅವರು ಹೇಳಿದ್ದಾರೆ.

ಕಾರು ಅಪಘಾತದ ಕುರಿತು ತನಿಖೆ ನಡೆಸಲಾಗುತ್ತಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು