ಯಾಸಿನ್‌ ಮಲಿಕ್‌ಗೆ ಮೇ 24ರವರೆಗೆ ನ್ಯಾಯಾಂಗ ಬಂಧನ

ಭಾನುವಾರ, ಮೇ 26, 2019
27 °C

ಯಾಸಿನ್‌ ಮಲಿಕ್‌ಗೆ ಮೇ 24ರವರೆಗೆ ನ್ಯಾಯಾಂಗ ಬಂಧನ

Published:
Updated:

ನವದೆಹಲಿ (ಪಿಟಿಐ): ಜಮ್ಮು ಕಾಶ್ಮೀರ ಲಿಬರೇಷನ್‌ ಫ್ರಂಟ್‌ (ಜೆಕೆಎಲ್‌ಎಫ್‌) ಮುಖ್ಯಸ್ಥ ಯಾಸಿನ್‌ ಮಲಿಕ್‌ಗೆ ಇಲ್ಲಿನ ನ್ಯಾಯಾಲಯ ಮೇ 24ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. 

ಪ್ರತ್ಯೇಕತಾವಾದಿಗಳು ಮತ್ತು ಭಯೋತ್ಪಾದಕ ಸಂಘಟನೆಗಳಿಗೆ ಹಣಕಾಸು ನೆರವು ಒದಗಿಸಿದ ಆರೋಪದ ಮೇಲೆ ಆತನನ್ನು ಬಂಧಿಸಲಾಗಿತ್ತು.

ಭದ್ರತಾ ಕಾರಣಗಳಿಗಾಗಿ ಆತನನ್ನು ವಿಡಿಯೊ ಕಾನ್ಫರೆನ್ಸ್‌ ಮೂಲಕವೇ ವಿಚಾರಣೆಗೆ ಒಳಪಡಿಸಬೇಕು ಎಂದು ತಿಹಾರ್‌ ಜೈಲಿನ ಅಧಿಕಾರಿಗಳು ಕೋರಿದ್ದರು. ಈ ಬಗ್ಗೆ ಹೆಚ್ಚುವರಿ ಸೆಷನ್ಸ್‌ ನ್ಯಾಯಾಧೀಶ ರಾಕೇಶ್‌ ಸ್ಯಾಲ್‌ ಅವರು  ಆರೋಪಿ ಪರ ವಕೀಲರಿಂದ ಪ್ರತಿಕ್ರಿಯೆ ಕೇಳಿದರು. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !