ಎತ್ತಿನಹೊಳೆ ಅನುಷ್ಠಾನಕ್ಕೆ ನಿಯೋಗ

ಬುಧವಾರ, ಜೂಲೈ 17, 2019
29 °C

ಎತ್ತಿನಹೊಳೆ ಅನುಷ್ಠಾನಕ್ಕೆ ನಿಯೋಗ

Published:
Updated:
Prajavani

ಯಲಹಂಕ: ‘ಎತ್ತಿನಹೊಳೆ ಯೋಜನೆಯನ್ನು ತ್ವರಿತವಾಗಿ ಅನುಷ್ಠಾನಗೊಳಿಸುವ ಸಂಬಂಧ ಸಂಸದರ ನಿಯೋಗ ಕೇಂದ್ರದ ಜಲಶಕ್ತಿ ಸಚಿವರನ್ನು ಭೇಟಿಯಾಗಿ, ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಲಾಗುವುದು’ ಎಂದು ಸಂಸದ ಬಿ.ಎನ್.ಬಚ್ಚೇಗೌಡ ಹೇಳಿದರು.

ಲೋಕೋಪಯೋಗಿ ಇಲಾಖೆಯ ಅನುದಾನದಡಿಯಲ್ಲಿ ₹4.40 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ 6 ಕಿ.ಮೀ. ರಸ್ತೆ ಅಭಿವೃದ್ಧಿ ಕಾಮಗಾರಿಗೆ ಕಡತನಮಲೆ ಗ್ರಾಮದಲ್ಲಿ ಚಾಲನೆ ನೀಡಿ ಮಾತನಾಡಿದರು. ‌

‘ಚಿಕ್ಕಬಳ್ಳಾಪುರ, ಕೋಲಾರಕ್ಕೆ ನೀರಾವರಿ ಮತ್ತು ಕುಡಿಯುವ ನೀರು ಒದಗಿಸಲು ಆದ್ಯತೆ ನೀಡಲಾಗುತ್ತದೆ. ಕೇಂದ್ರ ಸಚಿವ ಡಿ.ವಿ.ಸದಾನಂದಗೌಡರ ನೇತೃತ್ವದಲ್ಲಿ ಸಚಿವರೊಂದಿಗೆ ಮಾತುಕತೆ ನಡೆಸಿ, ಅಗತ್ಯ ಅನುದಾನ ಮತ್ತು ಅಡೆತಡೆ ನಿವಾರಣೆಗೆ ಕ್ರಮ ಕೈಗೊಳ್ಳಲಾಗುವುದು’ ಎಂದರು.

ಶಾಸಕ ಎಸ್.ಆರ್.ವಿಶ್ವನಾಥ್ ಮಾತನಾಡಿ, ‘ಕಂದಾಯ ಇಲಾಖೆಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ’ ಎಂದರು.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !