ಭಾನುವಾರ, ಸೆಪ್ಟೆಂಬರ್ 19, 2021
31 °C
ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಪೊಲೀಸ್‌ ವಶಕ್ಕೆ

ಯೋಗ ಗುರು ಆನಂದ್ ಗಿರಿ ಬಂಧನ

ಪಿಟಿಐ Updated:

ಅಕ್ಷರ ಗಾತ್ರ : | |

ಮೆಲ್ಬರ್ನ್‌: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಉತ್ತರ ಪ್ರದೇಶದ ಅಲಹಾಬಾದ್‌ ಮೂಲದ ಸ್ವಯಂಘೋಷಿತ ಆಧ್ಯಾತ್ಮಿಕ ಗುರು ಆನಂದ್‌ ಗಿರಿ ಎಂಬಾತನನ್ನು ಸಿಡ್ನಿಯಲ್ಲಿ ನ್ಯೂ ಸೌತ್‌ ವೇಲ್ಸ್ ಪೊಲೀಸರು ಬಂಧಿಸಿದ್ದಾರೆ. 

2016 ಹೊಸ ವರ್ಷದ ವೇಳೆ ರೂಟಿ ಹಿಲ್ಸ್‌ ಪ್ರದೇಶದಲ್ಲಿ ಮನೆಯೊಂದರಲ್ಲಿ ಪೂಜೆಗೆ ತೆರಳಿದ್ದ ಆನಂದ್‌ ಗಿರಿ, ಆ ಮನೆಯ 29 ವರ್ಷದ ಮಹಿಳೆಯ ಮೇಲೆ ಮಲಗುವ ಕೋಣೆಯಲ್ಲಿ ಲೈಂಗಿಕ ದೌರ್ಜನ್ಯ ನಡೆಸಿದ್ದರು.

2018ರಲ್ಲಿ ಮತ್ತೆ ರೂಟಿ ಹಿಲ್ಸ್‌ ಪ್ರದೇಶದಲ್ಲಿ ಮನೆಯೊಂದರಲ್ಲಿ ಪೂಜಾ ಕಾರ್ಯಕ್ರಮಕ್ಕೆ ತೆರಳಿ 34 ವರ್ಷದ ಮಹಿಳೆ ಮೇಲೆ ದೌರ್ಜನ್ಯ ನಡೆಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಈ ಎರಡೂ ಪ್ರಕರಣಗಳ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದರು.

ಮೇ 6ರಂದು ಆಸ್ಟ್ರೇಲಿಯಾದಿಂದ ಹೊರಡಲು ಸಿದ್ಧತೆ ನಡೆಸಿದ್ದ ಮಾಹಿತಿ ಪಡೆದಿದ್ದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಮತ್ತೆ ಮಹಿಳೆಯರ ಮೇಲೆ ದೌರ್ಜನ್ಯ ನಡೆಸಬಹುದು ಎನ್ನುವ ಕಾರಣ ನೀಡಿ ಜಾಮೀನು ತಿರಸ್ಕರಿಸಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.