2,41,106 ಮಕ್ಕಳಿಗೆ ಝಿಂಕ್ ಮಾತ್ರೆ

ಬುಧವಾರ, ಜೂನ್ 26, 2019
28 °C
ವದಂತಿಗಳಿಗೆ ಕಿವಿಗೊಡಬೇಡಿ; ಓ.ಆರ್‌.ಎಸ್‌. ಪ್ಯಾಕೇಟ್‌ ಪಡೆಯಿರಿ

2,41,106 ಮಕ್ಕಳಿಗೆ ಝಿಂಕ್ ಮಾತ್ರೆ

Published:
Updated:
Prajavani

ಮೈಸೂರು: ‘401 ಹೈರಿಸ್ಕ್‌ ಪ್ರದೇಶ ಸೇರಿದಂತೆ ಜಿಲ್ಲೆಯಾದ್ಯಂಥಹ ಒಟ್ಟು 2,41,106 ಮಕ್ಕಳಿಗೆ ಓ.ಆರ್‌.ಎಸ್. ಪ್ಯಾಕೇಟ್‌ ಹಾಗೂ ಝಿಂಕ್‌ ಮಾತ್ರೆಗಳನ್ನು ವಿತರಿಸಲು ಜಿಲ್ಲಾ ಆರೋಗ್ಯ ಇಲಾಖೆ ಸನ್ನದ್ಧವಾಗಿದೆ’ ಎಂದು ಡಿಎಚ್‌ಓ ಆರ್.ವೆಂಕಟೇಶ್‌ ತಿಳಿಸಿದರು.

ಮೈಸೂರು ತಾಲ್ಲೂಕಿನ ಕೀಳನಪುರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೋಮವಾರ ನಡೆದ ಅತಿಸಾರಭೇದಿ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಅವರು, ‘ಪೋಷಕರು ಹಾಗೂ ಸಮುದಾಯವು ಯಾವುದೇ ಆತಂಕಕ್ಕೆ ಒಳಗಾಗಬೇಕಿಲ್ಲ. ವದಂತಿಗಳಿಗೆ ಕಿವಿಗೊಡದೆ, ತಮ್ಮ 5 ವರ್ಷದೊಳಗಿನ ಮಕ್ಕಳಿಗೆ ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಿ, ಕೊಡುವ ಓ.ಆರ್.ಎಸ್ ಪ್ಯಾಕೇಟ್ ಮತ್ತು ಝಿಂಕ್ ಮಾತ್ರೆಗಳನ್ನು ಪಡೆದುಕೊಳ್ಳಿ’ ಎಂದು ಮನವಿ ಮಾಡಿಕೊಂಡರು.

‘ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಓ.ಆರ್.ಎಸ್ ಮತ್ತು ಝಿಂಕ್ ಕಾರ್ನರ್‌ಗಳನ್ನು ತೆರೆದಿದ್ದು, ಈ ಕೇಂದ್ರಗಳಿಗೆ ಬರುವ 5 ವರ್ಷದೊಳಗಿನ ಮಕ್ಕಳಿಗೂ ಸಹಾ ಓ.ಆರ್.ಎಸ್ ಪ್ಯಾಕೇಟ್ ಮತ್ತು ಝಿಂಕ್ ಮಾತ್ರೆಗಳನ್ನು ನೀಡಲು ವ್ಯವಸ್ಥೆ ಮಾಡಲಾಗಿದೆ’ ಎಂದು ಹೇಳಿದರು.

‘ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಿ ಐದು ವರ್ಷದೊಳಗಿನ ಮಕ್ಕಳನ್ನು ಗುರುತಿಸಿ, ಆ ಮಕ್ಕಳಿಗೆ ಓ.ಆರ್.ಎಸ್ ಪ್ಯಾಕೇಟ್ ಮತ್ತು ಝಿಂಕ್ ಮಾತ್ರೆಗಳನ್ನು ನೀಡುವುದರ ಜತೆಯಲ್ಲೇ, ಓ.ಆರ್.ಎಸ್ ಮತ್ತು ಝಿಂಕ್ ದ್ರಾವಣವನ್ನು ತಯಾರಿಸುವ ವಿಧಾನಗಳನ್ನು ಪ್ರದರ್ಶಿಸುವ ಮೂಲಕ ಪೋಷಕರಿಗೆ ಅರಿವು ಮೂಡಿಸಲಾಗುವುದು’ ಎಂದು ತಿಳಿಸಿದರು.

‘ಐದು ವರ್ಷದೊಳಗಿನ ಮಕ್ಕಳಲ್ಲಿ ಭೇದಿಯ ಲಕ್ಷಣಗಳು ಕಂಡುಬಂದಲ್ಲಿ, ಅಂತಹ ಪ್ರಕರಣಗಳನ್ನು ಸಂಶಯಾತ್ಮಕ ಅತಿಸಾರಭೇದಿ ಪ್ರಕರಣ ಎಂದು ಪರಿಗಣಿಸಿ, ಅಂತಹ ಮಕ್ಕಳಿಗೆ ವಿಶೇಷ ಆದ್ಯತೆಯ ಮೇರೆಗೆ 14 ದಿನಗಳವರೆಗೂ ಓ.ಆರ್.ಎಸ್ ಪ್ಯಾಕೇಟ್ ಮತ್ತು ಝಿಂಕ್ ಮಾತ್ರೆಗಳನ್ನು ದ್ರಾವಣ ಮಾಡಿ ಆಶಾ ಕಾರ್ಯಕರ್ತೆಯರ ಮತ್ತು ಆರೋಗ್ಯ ಸಿಬ್ಬಂದಿಗಳ ಮಾರ್ಗದರ್ಶನದ ಮೇರೆಗೆ ಉಪಯೋಗಿಸಿ’ ಎಂದು ಜಿಲ್ಲಾ ಆರ್‌ಸಿಎಚ್‌ ಅಧಿಕಾರಿ ಡಾ.ಎಲ್‌.ರವಿ ಮನವಿ ಮಾಡಿದರು.

ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಪರಿಮಳಾ ಶ್ಯಾಮ್, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಕಾಳಮ್ಮ ಕೆಂಪರಾಮಯ್ಯ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಯಡಕೊಳ ಜಿಲ್ಲಾ ಪಂಚಾಯಿತಿ ಸದಸ್ಯೆ ಕೆ.ವೈ.ಭಾಗ್ಯ, ತಾಲ್ಲೂಕು ಪಂಚಾಯಿತಿ ಸದಸ್ಯೆ ಎಚ್.ಎಸ್.ಅಂಜಲಿ, ಕೀಳನಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸಣ್ಣಮ್ಮ ಉಪಸ್ಥಿತರಿದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !